ಮಂಗಳೂರು: ಮಳೆಯಿಂದಾಗಿ ಕಾಮಗಾರಿ ವೇಳೆ ಕಟ್ಟಡ ಕುಸಿದು ಕಾರ್ಮಿಕರು ಸಿಲುಕಿದ ಘಟನೆ ನಡೆದಿದೆ. ಈ ಘಟನೆ ನಗರದ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್ ಗೆ ಸೇರಿದ ಕಟ್ಟಡ ನಿರ್ಮಾಣ ವೇಳೆ ಈ ಅವಘಡ ಸಂಭವಿಸಿದೆ. ರಾಜ್ಕುಮಾರ್ (18) ಬಿಹಾರ ಮೂಲದ ವ್ಯಕ್ತಿ ಮತ್ತು ಚಂದನ್ಕುಮಾರ್ (30) ಉತ್ತರ ಪ್ರದೇಶ, ಮಣ್ಣಿನಲ್ಲಿ ಸಿಲುಕಿದ್ದ ಕಾರ್ಮಿಕರು.
ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಸಡಿಲಗೊಂಡಿದ್ದ ಮಣ್ಣಿನ ದಿಬ್ಬ ಕುಸಿದ ಪರಿಣಾಮ ಘಟನೆ ಸಂಭವಿಸಿದೆ.ಈಗಾಗಲೇ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಮಣ್ಣಿನಡಿ ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಇಬ್ಬರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅದರಲ್ಲಿ ಓರ್ವನನ್ನು ರಕ್ಷಿಸಲಾಗಿದೆ.
ಸದ್ಯ ಮಣ್ಣಿನಡಿಯಲ್ಲಿ ಮತ್ತೋರ್ವ ಕಾರ್ಮಿಕರು ಕಾಣುತ್ತಿದ್ದು, ಕಾರ್ಮಿಕರ ಜೊತೆಗೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದಾರೆ. ಇನ್ನು ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಟ್ರೆಚ್ಚರ್ ಜೊತೆ ಆಗಮಿಸಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.

