ಮಂಗಳೂರು : ರಾಜ್ಯ ಸರಕಾರ ಆಡಳಿತ, ಅಭಿವೃದ್ಧಿ ಯೋಜನೆ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದೇ ಚರ್ಚೆ ಯಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ, ಅವರೇ ಘೋಷಿಸಿದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೂ ಸರಿಯಾಗಿ ಯೋಜನೆಯ ಫಲ ಸಿಗುತ್ತಿಲ್ಲ ಎಂದರು.

