Bengaluru 24°C
Ad

ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

Ad
Ad
Nk Channel Final 21 09 2023
Ad