ಮಂಗಳೂರು: ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂ ನಿಂದ ಗೂಂಡಗಿರಿ ನಡೆಸಿದ ಘಟನೆ ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ನಡೆದಿದೆ.

ಪುರಸಭೆ ಸದಸ್ಯ, ರೌಡಿಶೀಟರ್ ಆಗಿರೊ ಅಸೈನರ್ ತಂಡದಿಂದ ದಾಂದಲೆ ನಡೆಸಿದ್ದು, ಗರ್ಭಿಣಿ ಮಹಿಳೆ ಇದ್ದ ಮನೆಗೆ ನುಗ್ಗಿ ಪುರುಷರ ಮೇಲೆ ಹಲ್ಲೆ ನಡೆಸಲಾಗಿದೆ. ಮನೆ ಬಾಡಿಗೆ ವ್ಯಾಜ್ಯ ಸಂಬಂಧ ಸಾಹುಲ್ ಹಮೀದ್ ಎಂಬುವವರ ಮನೆಗೆ ಮದ್ಯರಾತ್ರಿ ನುಗ್ಗಿ ಹಲ್ಲೆ ನಡೆಸಲಾಗಿದೆ.

ಈ ವೇಳೆ 112 ಪೊಲೀಸರು ಬಂದ ಕಾರಣ ಭಾರೀ ಅನಾಹುತ ತಪ್ಪಿದೆ. ಗಾಯಾಳುಗಳಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳ ಟೌನ್ ಠಾಣೆಯಲ್ಲಿ ಎರಡು ಕಡೆಯಿಂದ ದೂರು-ಪ್ರತಿದೂರು ದಾಖಲಾಗಿದ್ದು, ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ದಾಖಲಾಗಿದೆ.