ಕಡಬ: ಕಡಬ ಪಟ್ಟಣ ಪಂಚಾಯತ್ ನ ಮೊದಲ ಚುನಾವಣೆಯಲ್ಲಿ ಕಾಂಗ್ರೇಸ್ ಜಯಭೇರಿ ಬಾರಿಸಿದ್ದು, 13 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಗೆದ್ದು ಕಾಂಗ್ರೇಸ್ ಬಹುಮತ ಪಡೆದಿದ್ದು, ಬಿಜೆಪಿ 5 ಸ್ಥಾನಗಳಿಗೆ ತೃಪ್ತಿಪಟ್ಟಿದೆ.

ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡ್ಗಗಳಿಗೆ ಅಗಸ್ಟ್ 17 ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್‌ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ ಏರಳಿದೆ. ತೀವ್ರ ಪೈಪೋಟಿ ನೀಡಿರುವ ಬಿಜೆಪಿ ಬಿಜೆಪಿ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ.