ಮಂಗಳೂರು : ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಮಿನಿ ವಿಧಾನ ಸೌಧ ಬಳಿ ಪ್ರತಿಭಟನೆ ನಡೆಸಲಾಯಿತು. ಸೂಕ್ತ ಪರಿಹಾರ ಮತ್ತು ತಪ್ಪಿಸ್ತನ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ರಾಜ್ಯ ಸರಕಾರ , ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ನಾಯಕ್ , ಕಿಶೋರ್ ಕುಮಾರ್ , ಸತೀಶ್ ಕುಂಪಲ ಸಾಥ್ ನೀಡಿದರು. ಪ್ರತಿಭಟನೆಯನ್ನ ಉದ್ದೇಶಿಸಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮುಖ್ಯ ಭಾಷಣ ಮಾಡಿದರು.

