ಬೆಳ್ತಂಗಡಿ: ಕ್ರೇನ್ ವಾಹನವೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಎಂದು ಗುರುತಿಸಲಾಗಿದೆ. ಇವರು ಬೆಳಾಲು ಗ್ರಾಮದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದರು.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.