Bengaluru 28°C

ಮಂಗಳೂರು: ಸೈಬರ್ ಕ್ರೈಂ ಪ್ರಕರಣ: ಆರೋಪಿ ಪೊಲೀಸರ ವಶಕ್ಕೆ

: ಸೈಬರ್ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಇಎನ್ ಕ್ರೈಂ ಪೊಲೀಸರು ಕೇರಳದ ತ್ರಿಶೂರಿನ ನಿಧಿನ್ ಕುಮಾರ್ ಕೆ.ಎಸ್ ನನ್ನು ಬಂಧಿಸಿದ್ದಾರೆ.

ಮಂಗಳೂರು : ಸೈಬರ್ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಇಎನ್ ಕ್ರೈಂ ಪೊಲೀಸರು ಕೇರಳದ ತ್ರಿಶೂರಿನ ನಿಧಿನ್ ಕುಮಾರ್ ಕೆ.ಎಸ್ ನನ್ನು ಬಂಧಿಸಿದ್ದಾರೆ.


ಆರೋಪಿ ವಾಟ್ಸ್‌ಆ್ಯಪ್ ಸಂದೇಶಗಳ ಮೂಲಕ ಶೇರು ಮಾರುಕಟ್ಟೆಯ ಹೂಡಿಕೆಯಿಂದ ಹೆಚ್ಚಿನ ಲಾಭ ಪಡೆಯುವ ಭರವಸೆ ನೀಡಿ ದೂರುದಾರರಿಗೆ 10.32 ಲಕ್ಷ ರೂಪಾಯಿ ವಂಚಿಸಿದ್ದಾರೆ.


ಹಲವು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳು ಕಮಿಷನ್ ಆಧಾರದ ಮೇಲೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದರು.


ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮತ್ತು ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇತರ ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ.


Nk Channel Final 21 09 2023