ಮಂಗಳೂರು : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಪ್ರೆಸ್‌ಕ್ಲಬ್‌ಗೆ ಭೇಟಿ ನೀಡಿದ ಸಂದರ್ಭ ದ.ಕ. ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಮಂಗಳೂರು ಪ್ರೆಸ್‌ಕ್ಲಬ್‌ಗೆ ಭೇಟಿ ನೀಡಿದಾಗ ಮನೆಗೆ ಬಂದ ಅನುಭವವಾಗುತ್ತದೆ.
ಸಮಾಜ, ಜನರ ಪರ ಕಾರ್ಯ ನಿರ್ವಹಿಸುವ ಪತ್ರಕರ್ತರಿಗೂ ನೆರವಿನ ಅಗತ್ಯವಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ದೊರಕುವ ಸೌಲಭ್ಯಗಳು ಪತ್ರಕರ್ತರಿಗೆ ಒದಗಿಸುವ ನಿಟ್ಟಿನಲ್ಲಿ ಪಯತ್ನಿಸುತ್ತಿರುವುದಾಗಿ ಅವರು ಹೇಳಿದರು.

