Bengaluru 23°C
Ad

ಧರ್ಮಸ್ಥಳ ಸಂಘದ ಸಾಲದ ಕಂತು ಕಟ್ಟದಂತೆ ಅಪಪ್ರಚಾರ : ಇಬ್ಬರ ವಿರುದ್ಧ ದೂರು ದಾಖಲು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಬಾಳೆಪುಣಿಯ ಹೂಹಾಕುವಕಲ್ಲು ನಿವಾಸಿ ರವೀಂದ್ರ ಶೆಟ್ಟಿ ಮತ್ತು ಕಡಬ ತಾಲೂಕಿನ ಕೆಂಜಿಲಾಡಿ ನಿವಾಸಿ ಸಂತೋಷ್ ಶೆಟ್ಟಿ ಎಂಬವರ ವಿರುದ್ಧ ಹೆಬ್ರಿ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿರುವುದಾಗಿ ತಿಳಿದುಬಂದಿದೆ. ಆರೋಪಿಗಳು

ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಬಾಳೆಪುಣಿಯ ಹೂಹಾಕುವಕಲ್ಲು ನಿವಾಸಿ ರವೀಂದ್ರ ಶೆಟ್ಟಿ ಮತ್ತು ಕಡಬ ತಾಲೂಕಿನ ಕೆಂಜಿಲಾಡಿ ನಿವಾಸಿ ಸಂತೋಷ್ ಶೆಟ್ಟಿ ಎಂಬವರ ವಿರುದ್ಧ ಹೆಬ್ರಿ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿರುವುದಾಗಿ ತಿಳಿದುಬಂದಿದೆ. ಆರೋಪಿಗಳು

ಹೆಬ್ರಿ ತಾಲೂಕಿನ ವಿವಿಧೆಡೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳ ಮನೆಗೆ ಭೇಟಿ ನೀಡಿ ಸಾಲದ ಕಂತು ಕಟ್ಟದಂತೆ ಪ್ರಚೋದನೆ ನೀಡಿ ಮಾತುಕತೆ ಮಾಡಿದ ಬಗ್ಗೆ ವೀಡಿಯೋ ಮಾಡಿ ಯೂಟ್ಯೂಬ್ ನಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಅಲ್ಲದೆ ಮಹಿಳೆಯರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ರಿ ಅಧ್ಯಕ್ಷ ರತ್ನಾಕರ ಪೂಜಾರಿ ದೂರು ದಾಖಲಿಸಿದ್ದಾರೆ. ಆರೋಪಿಗಳನ್ನು ಠಾಣೆಗೆ ಕರೆಸಲಾಗಿದ್ದು, ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದು, ಮುಂದೆ ಈ ರೀತಿ ಮಾಡುವುದಿಲ್ಲವೆಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad
Ad
Nk Channel Final 21 09 2023
Ad