Bengaluru 22°C
Ad

ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿ ಜಾರಿ ಮಾಡಲು ಹೊರಟ ಕೇಂದ್ರದ ವಿರುದ್ಧ ʼಬೇಡಿಕೆ ದಿನಾಚರಣೆʼ

Prots

ಮಂಗಳೂರು: ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿ ಜಾರಿ ಮಾಡಲು ಹೊರಟ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಹಲವು ರೀತಿಯ ಬೇಡಿಕೆಗಳನ್ನು ಮುಂದಿಟ್ಟು ಇಂದು (ಜುಲೈ. 10 ) ದೇಶಾದ್ಯಂತ ಕಾರ್ಮಿಕ ವರ್ಗದ ನೇತ್ರತ್ವದಲ್ಲಿ ಬೇಡಿಕೆ ದಿನಾಚರಣೆ ನಡೆಸಬೇಕೆಂಬ CITU ಅಖಿಲ ಭಾರತ ಕರೆಯ ಮೇರೆಗೆ ಮಂಗಳೂರಿನ ಮಿನಿ‌ ವಿಧಾನಸೌಧದ ಎದುರು ಪ್ರತಿಭಟನೆಯನ್ನು ನಡೆಸಲಾಯಿತು.

Ad
300x250 2

ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿವಿಧ ವಿಭಾಗದ ಕಾರ್ಮಿಕರು ದೇಶವನ್ನು ಲೂಟಿಗೈದ ನರೇಂದ್ರ ಮೋದಿ ಸರಕಾರದ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ಕಾರ್ಪೊರೇಟ್ ಕೋಮುವಾದಿಗಳ ಅಕ್ರಮ ಕೂಟವು ದೇಶವನ್ನು ತೀರಾ ಅಧೋಗತಿಗೆ ತಳ್ಳಿದ್ದು, ದೇಶದ ಅರ್ಥ ವ್ಯವಸ್ಥೆಯೇ ತೀರಾ ಸಂಕಷ್ಟದಲ್ಲಿದೆ. ಇವುಗಳ ವಿರುದ್ಧ ಬೆಳೆದುಬಂದ ರೈತ ಕಾರ್ಮಿಕರ ಹೋರಾಟಗಳಿಂದಾಗಿ ನಿರುದ್ಯೋಗ,ಬೆಲೆಯೇರಿಕೆ ರೈತ ಕಾರ್ಮಿಕರ ಸಂಕಷ್ಟಗಳು,ಸರಕಾರದ ಮಾರಕ ಧಾಳಿಗಳ ಬಗ್ಗೆ ಜನತೆಯ ಹಾಗೂ ಜಗತ್ತಿನ ಗಮನ ಸೆಳೆಯಲು ಸಾಧ್ಯವಾಯಿತು. ಮಾತ್ರವಲ್ಲದೆ ಈ ಬಾರಿಯ ಚುನಾವಣೆಯಲ್ಲಿಯೂ ದೇಶದ ಜನತೆ ತಕ್ಕಪಾಠವನ್ನು ಕಲಿಸಿದ್ದಾರೆ.
Whatsapp Image 2024 07 10 At 1.08.21 Pm (1)

ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಿ ನಾಲ್ಕೈದು ವರ್ಷ ಕಳೆದರೂ ಜಾರಿಗೆ ತರಲು ಅಡ್ಡಿಯಾಗಿರುವುದು ಕಾರ್ಮಿಕ ವರ್ಗದ ಸಮರಧೀರ ಹೋರಾಟವೇ ಅಗಿದೆ.ನೂತನ ಕೇಂದ್ರ ಸರಕಾರದ ಮೊದಲ 100 ದಿನಗಳಲ್ಲಿ ಕಾರ್ಮಿಕ ಕಾನೂನುಗಳ ವಿರುದ್ಧ ತೀವ್ರ ಧಾಳಿ ನಡೆಸಲು ಸಜ್ಜಾಗಿರುವ ಕೇಂದ್ರ ಸರಕಾರದ ವಿರುದ್ದ ಸಮರಶೀಲ ಹೋರಾಟವನ್ನು ನಡೆಸಲು ಕಾರ್ಮಿಕ ವರ್ಗ ಸಜ್ಜಾಗಬೇಕೆಂದು ಕರೆ ನೀಡಿದರು.

CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ನವ ಉದಾರೀಕರಣ ನೀತಿಗಳ ಫಲವಾಗಿ ಕಾರ್ಮಿಕ ವರ್ಗ ವಿಪರೀತ ಸಂಕಷ್ಟಗಳಿಗೆ ಒಳಗಾಗಿದ್ದು ಕಳೆದ ಕೆಲವು ದಶಕಗಳಿಂದ ಪರಿಣಾಮಕಾರಿ ಹೋರಾಟಗಳ ಮೂಲಕ ಆಳುವ ವರ್ಗದ ನಿದ್ದೆಗೆಡಿಸಿದೆ. ಕೇಂದ್ರದಲ್ಲಿ ಅಧಿಕಾರಕ್ಕೇರಿದ ನೂತನ ಸರಕಾರ ಮತ್ತೆ ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ಜಾರಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುವ ಮೂಲಕ ಕಾರ್ಪೊರೇಟ್ ಕಂಪೆನಿಗಳನ್ನು ಮೆಚ್ಚಿಸಲು ಹೊರಟಿದೆ ಎಂದು ಹೇಳಿದರು.
Whatsapp Image 2024 07 10 At 1.08.20 Pm

CITU ಜಿಲ್ಲಾ ಉಪಾಧ್ಯಕ್ಷರೂ, ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷರಾದ ಬಿ.ಕೆ.ಇಮ್ತಿಯಾಜ್ ರವರು ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ಸರಕಾರ 3 ಕರಾಳ ಕಾನೂನುಗಳನ್ನು ಜಾರಿಗೊಳಿಸಿ ದುಡಿಯುವ ವರ್ಗದ ಮೇಲೆ ವ್ಯಾಪಕ ಧಾಳಿ ನಡೆಸಲು ತಯಾರಾಗಿದೆ.ನೂತನ ಕ್ರಿಮಿನಲ್ ಸೆಕ್ಷನ್ 285 ಜಾರಿ ಮಾಡಿ ಬಡಪಾಯಿ ಬೀದಿಬದಿ ವ್ಯಾಪಾರಸ್ಥರ ಬದುಕಿಗೆ ಕೊಳ್ಳಿ ಇಡುತ್ತಿದೆ ಎಂದು ತೀವ್ರವಾಗಿ ಟೀಕಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರುರವರು ದೇಶದ ಕಾರ್ಮಿಕ ವರ್ಗ ಕೇಂದ್ರ ಸರಕಾರದ ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ಗಮನ ಸೆಳೆದರು.

ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ರೈತ ಸಂಘದ ನಾಯಕರಾದ ಸದಾಶಿವದಾಸ್, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ತಿಮ್ಮಯ್ಯ ಕೊಂಚಾಡಿ, ರಾದಾಕ್ರಷ್ಣ ಬೊಂಡಂತಿಲ,DYFI ನಾಯಕರಾದ ಸಂತೋಷ್ ಬಜಾಲ್,ಮಹಿಳಾ ಮುಖಂಡರಾದ ಯೋಗಿತಾ ಉಳ್ಳಾಲರವರು ಭಾಗವಹಿಸಿದ್ದರು.

ಪ್ರತಿಭಟನೆಯ ನೇತ್ರತ್ವವನ್ನು CITU ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ವಸಂತಿ ಕುಪ್ಪೆಪದವು, ನೋಣಯ್ಯ ಗೌಡ,ಅಶೋಕ್ ಶ್ರೀಯಾನ್, ನಾಗೇಶ್ ಕೋಟ್ಯಾನ್,ಭವಾನಿ ವಾಮಂಜೂರು, ಲೋಲಾಕ್ಷಿ ಬಂಟ್ವಾಳ, ಮಹಮ್ಮದ್ ಮುಸ್ತಾಫ, ಬೀದಿಬದಿ ವ್ಯಾಪಾರಸ್ಥರ ಸಂಘದ ಮುಖಂಡರಾದ ಅಬ್ದುಲ್ ರೆಹಮಾನ್, ಮುಝಾಫರ್, ಆದಂ ಬಜಾಲ್, ಗಜಾನನ ಮುಂತಾದವರು ವಹಿಸಿದ್ದರು.

ಹೋರಾಟದ ಬಳಿಕ CITUನ ಉನ್ನತ ಮಟ್ಟದ ನಿಯೋಗವೊಂದು ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಬೇಡಿಕೆಗಳನ್ನು ಹೊಂದಿರುವ ಮನವಿಯನ್ನು ಅರ್ಪಿಸಲಾಯಿತು.

Ad
Ad
Nk Channel Final 21 09 2023
Ad