Bengaluru 24°C
Ad

ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ : ಚಿಕ್ಕಮಗಳೂರಿನಲ್ಲಿ 489 ಕೇಸ್​ ಪತ್ತೆ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಕೆ ಬದಲಿಗೆ ಏರಿಕೆ ಕಾಣುತ್ತಿದೆ. ಕರಾವಳಿಯಲ್ಲೂ ಕಳೆದ ವರ್ಷಕ್ಕಿಂತ ಈ ಬಾರಿ ಎರಡು ಪಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇನ್ನು ಮಲೆನಾಡು ಚಿಕ್ಕಮಗಳೂರಿನಲ್ಲಿ 489 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಮಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಕೆ ಬದಲಿಗೆ ಏರಿಕೆ ಕಾಣುತ್ತಿದೆ. ಕರಾವಳಿಯಲ್ಲೂ ಕಳೆದ ವರ್ಷಕ್ಕಿಂತ ಈ ಬಾರಿ ಎರಡು ಪಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇನ್ನು ಮಲೆನಾಡು ಚಿಕ್ಕಮಗಳೂರಿನಲ್ಲಿ 489 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಅಕಾಲಿಕ ಮಳೆ ಹಾಗೂ ಜನ ಸ್ವಚ್ಛತೆ ಕಾಪಡದೇ ಇರುವುದು ಇದಕ್ಕೆ ಕಾರಣವಾಗಿದೆ. ಮಂಗಳೂರಿನಲ್ಲಿ ಇದುವರೆಗೂ ಒಟ್ಟು 211 ಪ್ರಕರಣಗಳು ದಾಖಲಾಗಿದೆ. ಗ್ರಾಮೀಣ ಭಾಗದಲ್ಲಿ ರಬ್ಬರ್, ಅಡಕೆ ತೋಟಗಳೇ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಲಾರ್ವಾ ಉತ್ಪತ್ತಿ ತಾಣಗಳಾಗುತ್ತಿದ್ರೆ. ನಗರದಲ್ಲಿ ನೀರು ನಿಲ್ಲುವ ಹೂವಿನ ಕುಂಡ, ಟೈರ್, ತೆರೆದಿಡುವ ನೀರಿನ ಟ್ಯಾಂಕ್, ಟೆರೇಸ್ ಮೇಲಿರುವ ಒವರ್ ಹೆಡ್ ಟ್ಯಾಂಕ್ ಕಾರಣವಾಗುತ್ತಿದೆ.

Ad
Ad
Nk Channel Final 21 09 2023
Ad