Ad

ಕಲ್ಲಡ್ಕ : ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದ ದ.ಕ ಜಿಲ್ಲಾಧಿಕಾರಿ

Whatsapp Image 2024 06 12 At 1.57.45 Pm

ಮಂಗಳೂರು: ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು (ಬುಧವಾರ) ಬೆಳಿಗ್ಗೆ ಕಲ್ಲಡ್ಕಕ್ಕೆ ಭೇಟಿ ನೀಡಿ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪರಿಶೀಲನೆ ನಡೆಸಿದರು.

Ad
300x250 2

ಕಲ್ಲಡ್ಕ ಪೇಟೆಯಲ್ಲಿ ಫ್ಲೈ ಓವರ್ ನಿರ್ಮಾಣ ಮಾಡುವ ಕಾಮಗಾರಿ ಭರದಿಂದ ಸಾಗುತ್ತಿದೆಯಾದರೂ ವಾಹನ ಸಂಚಾರಕ್ಕೆ ಅನುಕೂಲವಾದ ಸರ್ವಿಸ್ ರಸ್ತೆ ನಿರ್ಮಿಸದೆ ವಾಹನ ಸವಾರರು ಕೆಸರು ಮಿಶ್ರಿತ ಹೊಂಡಗಳಿಂದ ಕೂಡಿರುವ ರಸ್ತೆಯಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಇದೀಗ ಮಳೆಗಾಲ ಆರಂಭವಾದಾಗಿನಿಂದ ವಾಹನ ಸವಾರರು ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ.
Mullai Mugilan

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಾಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು ಹೆದ್ದಾರಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಅಲ್ಲದೆ ಜಿಲ್ಲಾಧಿಕಾರಿಗಳು ಸ್ವತಃ ಸ್ಕೂಟರ್ ನಲ್ಲಿ ಸಂಚರಿಸಿ ಹೆದ್ದಾರಿ ಸ್ಥಿತಿಗತಿ ಖುದ್ದು ವೀಕ್ಷಿಸಿದರು.
Dc

Ad
Ad
Nk Channel Final 21 09 2023
Ad