Bengaluru 22°C
Ad

ಆರ್ಯಭಟ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಆಯ್ಕೆ

Dinesh Kopada

ಮಂಗಳೂರು: ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024ಗೆ ಆಯ್ಕೆಯಾಗಿದ್ದಾರೆ.

ಯಕ್ಷಗಾನ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜೂನ್ 6ರಂದು ಸಂಜೆ 6.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕೊಡಲಾಗುತ್ತದೆ.

ದಿನೇಶ್ ಕೋಡಪದವು ಅವರು ಪ್ರಸ್ತುತ ನಡೆಯುವ ವಿಚಾರಗಳನ್ನು ಹಾಸ್ಯ ರೂಪದಲ್ಲಿ ರಂಗಸ್ಥಳಕ್ಕೆ ತರುವಲ್ಲಿ ಸಿದ್ಧಹಸ್ತರು. ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ವಿಚಾರವನ್ನು ಹಾಸ್ಯದ ರೂಪದಲ್ಲಿ ಯಕ್ಷಗಾನದಲ್ಲಿ ತೆರೆದಿಟ್ಟಿದ್ದರು.

Ad
Ad
Nk Channel Final 21 09 2023
Ad