ಮಂಗಳೂರು : ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಿಂದ ಡಿ.22ರ ಸೋಮವಾರದಂದು ಬೆಳಿಗ್ಗೆ 10.45 ಗಂಟೆಗೆ ಪಾದಯಾತ್ರೆ ಆರಂಭವಾಗಿದ್ದು, ಜಿಲ್ಲಾ ಬಿಜೆಪಿ ಕಚೇರಿಗೆ ಫೇರಾವ್ ಹಾಕಿ ಧರಣಿಗೆ ಪೊಲೀಸರು ಮಲ್ಲಿಕಟ್ಟೆ ಬಳಿ ತಡೆ ಹಿಡಿದ್ದಾರೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಹಾಗೂ ಸ್ವರೂಪ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿ, ಜೊತೆಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಸ್ವಾಯತ್ತ ಸಂಸ್ಥೆಯಾದ ಜಾರಿ ನಿರ್ದೇಶನಾಲಯವನ್ನು (ಈ.ಡಿ.) ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ  ಪ್ರತಿಭಟನೆ ನಡೆಯಿತು.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಿಂದ ಪಾದಯಾತ್ರೆ ಆರಂಭವಾಗಿದ್ದು, ಜಿಲ್ಲಾ ಬಿಜೆಪಿ ಕಚೇರಿಗೆ ಫೇರಾವ್ ಹಾಕಿ ಧರಣಿ ನಡೆಸುದಕ್ಕೆ  ಜಿಲ್ಲಾ ಕಾಂಗ್ರೆಸ್ ಸಮಿತಿ ಪಾದಯಾತ್ರೆ ಕದ್ರಿ ದ್ವಾರದ ಬಳಿ ತಲುಪುತಿದಂತೆ ಪೊಲೀಸರು ಪ್ರತಿಭಟನಾ ನಿರತರನ್ನ ತಡೆದು ಬಂಧಿಸಿದರು. ಕಾಂಗ್ರೆಸ್ ನಾಯಕರ ಜೊತೆ ಕಾರ್ಯಕರ್ತರನ್ನ ಬಂಧಿಸಿ ಪೊಲೀಸ್ ಬಸ್ಗೆ ತುಂಬಿಸಲಾಯಿತ್ತು.

ಈ ಸಂದರ್ಭದಲ್ಲಿ ಕೇಂದ್ರ ಸರಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರಾಮನಾಥ್ ರೈ , ಹೈವನ್ ಡಿಸೋಜಾ ,ಮಿಥುನ್ ರೈ , ಸುಹಾನ್ ಅಲ್ವ, ಸಹಿತ ಮತ್ತಿತರರನ್ನ ಬಂಧಿಸಲಾಯಿತು.