ಮಂಗಳೂರು: ನಗರದ ಆಶ್ರಯ ಆಂಗನ್ ಚಾರಿಟೇಬಲ್ ಟ್ರಸ್ಟ್ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವೈವಿದ್ಯಮ್ 2026 ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಿದೆ.

ಜುಲೈ 10ರಂದು ನಗರದ ಟೌನ್ ಹಾಲ್ ನಲ್ಲಿ ಈ ಸ್ಪರ್ಧೆ ನಡೆಯಲಿದೆ. “ವಿಶೇಷ ಚೇತನ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು, ಅವರ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡಲು ಹಾಗು ಅವರ ಪ್ರತಿಭೆಯನ್ನು ಸಂಭ್ರಮಿಸಲು ಈ ಸ್ಪರ್ಧೆ ಆಯೋಜಿಸಲಾಗಿದೆ,” ಎಂದು ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ಶ್ರೀಮತಿ ಆಶಾ ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಂಪರ್ಕ 9535625301