ಮಂಗಳೂರು: ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಬೆಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 10 ರಂದು ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು.ಕಲೆ,ಸಂಗೀತ ಕ್ಷೇತ್ರದಲ್ಲಿ ನ ಸಾಧನೆಗಾಗಿ ಈ ಗೌರವ ಲಭಿಸಿದೆ.ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗುರುಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ.
Ad