Bengaluru 26°C
Ad

ನ.27 ರಂದು ಡಾ.ಕೆ.ಚಿನ್ನಪ್ಪ ಗೌಡ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.

Ad

ರ

ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad
Ad
Ad
Nk Channel Final 21 09 2023