ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಮಾಣಿ ಸಮೀಪ ಕೊಡಾಜೆ ಎಂಬಲ್ಲಿ ರವಿವಾರ ನಡೆದಿದೆ. ಘಟನೆ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಸ್ಥಳೀಯರಾದ ವಿಕ್ಕಿ ಶೆಟ್ಟಿ ಮಾಣಿ ಮತ್ತು ತಂಡದವರ ಸಹಕಾರದಿಂದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಕುಶಾಲನಗರದಿಂದ ಪಣೋಲಿಬೈಲು ಕ್ಷೇತ್ರಕ್ಕೆ ಕುಟುಂಬ ಸಮೇತ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

