ಮಂಗಳೂರು: ಕಂಕನಾಡಿ – ಬೆಂದೂರ್ ವೆಲ್ ಮಾರ್ಗದಲ್ಲಿನ ಬೃಹತ್ ಗುಂಡಿಗಳ ಸಮಸ್ಯೆ ಕುರಿತು ಡಿವೈಎಫ್ಐ ಮಂಗಳೂರು ನಗರ ಸಮಿತಿಯು ಕಂಕನಾಡಿ ಕರಾವಳಿ ವೃತ್ತದ ಬಳಿ ಪ್ರತಿಭಟನೆ ನಡೆಸಿತು.
ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಜ್ ಅವರು ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡುತ್ತಾ, “ಸ್ಮಾರ್ಟ್ ಸಿಟಿ ಯೋಜನೆಯ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಖರ್ಚಾಗಿದ್ದರೂ, ಮಂಗಳೂರು ಪ್ರವೇಶದ ಮುಖ್ಯ ರಸ್ತೆ ನಿರ್ಲಕ್ಷ್ಯಕ್ಕೊಳಗಾಗಿದೆ.
ಗುಂಡಿಗಳಿಂದಾಗಿ ಪ್ರತಿದಿನ ಅಪಘಾತಗಳು ನಡೆಯುತ್ತಿದ್ದು, ಅದಕ್ಕಾಗುವ ಸಾವು-ನೋವಿಗೆ ಪಾಲಿಕೆ ಅಧಿಕಾರಿಗಳು ಜವಾಬ್ದಾರರಾಗಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರು ಮುಂದಾಗಿ, “15 ದಿನಗಳಲ್ಲಿ ರಸ್ತೆ ದುರಸ್ತಿ ಮಾಡದಿದ್ದರೆ ಡಿವೈಎಫ್ಐ ಉಗ್ರ ಹೋರಾಟ ಕೈಗೊಳ್ಳಲಿದೆ,” ಎಂದು ಎಚ್ಚರಿಸಿದರು.

