ಮಂಗಳೂರು : ಶಿಕ್ಷಣ ಸಂಸ್ಥೆಗಳು ಜಾತಿ, ಧರ್ಮ, ಭೇದವಿಲ್ಲದೆ ಕಾರ್ಯನಿರ್ವಹಿಸಬೇಕು. ಎಲ್ಲ ಧರ್ಮಗಳ ಹಬ್ಬಗಳಿಗೆ ಗೌರವ ನೀಡಬೇಕು. ಹಬ್ಬಗಳ ಸಂದರ್ಭದಲ್ಲಿ ರಜೆ ನೀಡದಿದ್ದರೂ ಪರವಾಗಿಲ್ಲ, ಆದರೆ ಪರೀಕ್ಷೆಗಳನ್ನು ಇಡಬಾರದು ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಸಲಹೆ ನೀಡಿದ್ದಾರೆ.

ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬಗಳ ಸಂದರ್ಭ ಪರೀಕ್ಷೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕ್ರಿಸ್ಮಸ್ ಸಂದರ್ಭದಲ್ಲಿ ಪರೀಕ್ಷೆ ನಿಗದಿಪಡಿಸಿದಾಗ ವಿದ್ಯಾರ್ಥಿ ಸಂಘಟನೆಗಳು ಮನವಿ ಮಾಡಿ ಪರೀಕ್ಷೆಗಳನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದವು.

ಅದೇ ರೀತಿ ಎಲ್ಲ ಹಬ್ಬಗಳ ಸಂದರ್ಭದಲ್ಲೂ ಸಮಾನ ನೀತಿ ಅನುಸರಿಸಬೇಕು. ಪ್ರತಿಬಾರಿಯೂ ಪರೀಕ್ಷೆ ವಿಚಾರವಾಗಿ ಜಿಲ್ಲಾಡಳಿತಕ್ಕೆ ಕರೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಆಗ್ರಹಿಸಿದರು.