Bengaluru 20°C
Ad

ಸೆ. 16 ರಂದು ಈದ್ ಮಿಲಾದ್ ಹಬ್ಬ: ಬಂಟ್ವಾಳದಲ್ಲಿ ಶಾಂತಿ ಸಭೆ

ಸೆ. 16 ರಂದು ಸೋಮವಾರ ನಡೆಯುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನಡೆಯಿತು.

ಬಂಟ್ವಾಳ : ಸೆ. 16 ರಂದು ಸೋಮವಾರ ನಡೆಯುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ನಡೆಯಿತು.

ಶಾಂತಿಯುತವಾಗಿ ಈದ್ ಮಿಲಾದ್ ಹಬ್ಬವನ್ನು ಆಚರಿಸಲು ಸಮುದಾಯದ ಪ್ರಮುಖರ ಜೊತೆ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಅವರು ಹಬ್ಬದ ವಿಚಾರದಲ್ಲಿ ಹಾಕುವ ಬ್ಯಾನರ್ ಬಟ್ಟಿಂಗ್ಸ್ ಗಳಿಗೆ ಅನುಮತಿ ಪಡೆಯಬೇಕು, ಅನಧಿಕೃತವಾಗಿ ಹಾಕುವಂತಿಲ್ಲ ಎಚ್ಚರಿಕೆ ನೀಡಿದ್ದಾರೆ.

ರಸ್ತೆ ಕಾಮಗಾರಿಯಿಂದ ಸಂಚಾರಕ್ಕೆ ತುಂಬಾ ಅಡಚಣೆಗಳು ಇರುವುದರಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ವಾಪಸು ಮನೆಗೆ ತೆರಳುವ ಯುವಕರು ವಾಹನದಲ್ಲಿ ಅತ್ಯಂತ ಜಾಗರೂಕತೆಯಿಂದ ವಾಹನಗಳ ಚಾಲನೆ ಮಾಡಬೇಕು ಮತ್ತು ಟ್ರಾಫಿಕ್ ರೂಲ್ಸ್ ಗಳನ್ನು ಪಾಲನೆ ಮಾಡಬೇಕು.

ಜೊತೆಗೆ ಮೆರವಣಿಗೆಯಲ್ಲಿ ಭಾಗವಹಿಸುವ ವಾಹನಳು ಕೂಡ ಟ್ರಾಫಿಕ್ ರೂಲ್ಸ್ ಗಳನ್ನು ಪಾಲನೆ ಮಾಡಬೇಕು.‌ ತಪ್ಪಿದರೆ ಅಂತಹ ವಾಹನಗಳ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಅತ್ಯಂತ ಶಾಂತಿಯುತವಾಗಿ ಆಚರಣೆ ಆಗಬೇಕು ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಗರ ಠಾಣಾ ಎಸ್. ಐ.ಗಳಾದ ರಾಮಕೃಷ್ಣ ಮತ್ತು ಕಲೈಮಾರ್ ಉಪಸ್ಥಿತರಿದ್ದರು.

Ad
Ad
Nk Channel Final 21 09 2023