ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ಮೀರಿ ಚುನಾವಣೆ ನಡೆಸಲಾಗಿದೆ ಎಂದು ಆರೋಪಿಸಿರುವ NSUI, ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಸರ್ಕಾರದ ಆದೇಶದಂತೆ ಚುನಾವಣೆ ನಡೆಯಬೇಕು, ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ NSUI ಮುಖಂಡ ಸುಹಾನ್ ಆಳ್ವ ಎಚ್ಚರಿಸಿದ್ದಾರೆ. ಸೆಪ್ಟೆಂಬರ್ 18ರಂದು ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸುವ ವೇಳೆ, ನಡೆದ ಚುನಾವಣೆಯನ್ನು ಅಸಿಂಧುಗೊಳಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.