ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 25ನೇ ಅವಧಿಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ಭಾನುಮತಿ ಅವರು ಆಯ್ಕೆಯಾಗಿದ್ದಾರೆ. ಇನ್ನು ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಮುಗಿದ್ದ ಬೆನ್ನಲ್ಲೇ ಸಂಘರ್ಷ ಕೂಡ ಶುರುವಾಗಿದೆ.
ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್ ಶೆಟ್ಟಿ ಭಾಗವಹಿಸಿದ್ದರು.ಮೇಯರ್ ಹುದ್ದೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣದಿಂದ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯುವಂತಾಯಿತು.
Ad