ಮಂಗಳೂರು : ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಇಂದು ಮಂಗಳೂರು ಪುರಭವನದಲ್ಲಿ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಕೋರಲಾಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಾ.ಪ್ರಭಾಕರ ಜೋಷಿ, ದಿನೇಶ್ ಅಮೀನ್ ಮಟ್ಟು, ಡಾ. ಚಿನ್ನಪ್ಪ ಗೌಡ ಸೇರಿದಂತೆ ರಂಗಭೂಮಿ, ಸಾಹಿತ್ಯ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ನಮನ ಸಲ್ಲಿಸಿದರು. ಇನ್ನು ಸದಾನಂದ ಸುವರ್ಣ ಅವರ ಇಚ್ಛೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರ ದೇಹ ದಾನ ಮಾಡಲಾಯಿತು.

