ಮಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಸಂಗ್ರಹವಾಗುತ್ತಿರುವ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಪ್ರಶ್ನೆ ಮಾಡಿದರು. ಪಂಜಾಬ್ ಮತ್ತು ಉತ್ತರ ಪ್ರದೇಶ ಚುನಾವಣೆಗಳಿಗೆ ರಾಜ್ಯದಿಂದ ಹಣ ಕಳುಹಿಸುವ ಉದ್ದೇಶದಿಂದ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದರು.

ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ರಾಜ್ಯದ ಹಣ ಬಳಸಲಾಗುತ್ತಿದೆ ಎಂದು ಟೀಕೆ ಮಾಡಿದ್ದು, ಚುನಾವಣಾ ವೆಚ್ಚದ ಹೊರೆ ರಾಜ್ಯದ ಜನತೆಯ ಮೇಲೆ ಹಾಕಲಾಗುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ ನೀಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ವಾಗ್ದಾಳಿ ನಡೆಸಿದರು.