Bengaluru 23°C
Ad

ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ ಎಡಪಂಥೀಯ ನಾಯಕರ ವಿರುದ್ದ ಎಫ್ಐಆರ್!

ಫ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ ಎಡಪಂಥೀಯ ನಾಯಕರ ವಿರುದ್ದ ಎಫ್ಐಆರ್ ದಾಖಲಾಗಿದೆ.

ಮಂಗಳೂರು: ಪ್ಯಾಲೆಸ್ತೀನ್ ಪರ ಪ್ರತಿಭಟನೆ ನಡೆಸಿದ ಎಡಪಂಥೀಯ ನಾಯಕರ ವಿರುದ್ದ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಕ್ಲಾಕ್ ಟವರ್ ಬಳಿ ಕಳೆದ ಸೋಮವಾರ ಸಿಪಿಎಂ ಮತ್ತು ಸಿಪಿಐ ಪಕ್ಷದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಗಿತ್ತು.

Ad

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದ ಕಾರಣಕ್ಕೆ ಪಕ್ಷದ 11 ಮಂದಿ ಮುಖಂಡರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್ಸೈ ಪ್ರವೀಣ್ ನೀಡಿದ ದೂರಿನಂತೆ ಸಿಪಿಎಂ ಮತ್ತು ಸಿಪಿಐ ಪಕ್ಷದ ನಾಯಕರ ಮೇಲೆ ಕೇಸು ದಾಖಲಾಗಿದ್ದು,

Ad

ನಾಗೇಶ್ ಕೋಟ್ಯಾನ್, ವಸಂತ ಆಚಾರಿ, ಯಾದವ ಶೆಟ್ಟಿ, ಸುಕುಮಾರ್ ರಾವ್, ಬಿ.ಕೆ. ಇಮ್ತಿಯಾಝ್, ಮುನೀರ್ ಕಾಟಿಪಳ್ಳ, ಸುನೀಲ್ ಕುಮಾರ್ ಬಜಾಲ್, ಯೋಗೀಶ್ ಜೆಪ್ಪಿನಮೊಗರು, ಹಯವದನ ರಾವ್, ಸೀತಾರಾಮ ಬೇರಿಂಜ ವಿರುದ್ಧ ಪ್ರಕರಣ ದಾಖಲಾಗಿದೆ.

Ad

ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲು ಅನುಮತಿ ಕೋರಿ ನಾಯಕರು ಮನವಿ ಸಲ್ಲಿಸಿದ್ದರು. ಆದರೆ ಮಂಗಳೂರು ನಗರ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನುಮತಿ ನಿರಾಕರಿಸಿದ್ದರು. ಧ್ವನಿವರ್ಧಕ ಬಳಕೆಗೂ ಅವಕಾಶ ಕಲ್ಪಿಸಿರಲಿಲ್ಲ. ಆದಾಗ್ಯೂ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Ad
Ad
Ad
Nk Channel Final 21 09 2023