ಮಂಗಳೂರು: ಗ್ರಾ.ಪಂ ಅಧ್ಯಕ್ಷೆ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಮುಸ್ಲಿಮರ ಜೊತೆ ವ್ಯಾಪಾರ ವಹಿವಾಟು ನಡೆಸಬೇಡಿ, ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಿ ಅಂತಾ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾಷಣ ಮಾಡಿರುವ ಆರೋಪ ಕೇಳಿಬಂದಿದೆ.
ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ನುಡಿನಮನ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾ.ಪಂ ಅಧ್ಯಕ್ಷೆ ಭಾರತಿ ಶೆಟ್ಟಿ ಭಾಷಣ ಮಾಡಿದರು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ BNS 2023 U/S196(1) (a) ಅಡಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ವ್ಯಾಪಾರಿಗಳು, ಮುಸ್ಲಿಂ ಆಟೋ ಚಾಲಕರನ್ನು ಬಹಿಷ್ಕರಿಸಿ ಅಂತಾ ಭಾರತಿ ಶೆಟ್ಟಿ ಭಾಷಣ ಮಾಡಿದ್ದರು. ಹರಿಪ್ರಸಾದ್ ಇರ್ವತ್ರಾಯ ಎಂಬುವರ ದೂರಿನ ಆಧಾರದ ಮೇಲೆ ಎಫ್.ಐ.ಆರ್ ದಾಖಲಾಗಿದೆ.

