ಮಣಿಪಾಲ: ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ನ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅಕಸ್ಮಿಕ ಸಂಭವಿಸಿದ್ದು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಘಟಕದಲ್ಲಿ ವೆಡ್ಡಿಂಗ್ ಮಾಡುತ್ತಿರುವ ಸಂದರ್ಭದಲ್ಲಿ ಅದರ ಬೆಂಕಿಯ ಕಿಡಿ ಅಲ್ಲೆ ಸಮೀಪದಲ್ಲಿದ್ದ ಆಯಿಲ್ ಗೆ ತಗುಲಿ ಬೆಂಕಿ ಕಾಣಿಸಿಕೊಂಡಿತ್ತೆನ್ನಲಾಗಿದೆ.
ಇದರಿಂದ ಬೆಂಕಿ ಅಲ್ಲಿನ ಬಾಯ್ಲರ್ ಗೂ ವಿಸ್ತರಿಸಿತು. ಕೂಡಲೇ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದವರು ಒಂದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಇದರಿಂದ ಅಪಾರ ನಷ್ಟವಾಗಿದೆ ಎಂದು ತಿಳಿದುಬಂದಿದೆ.

