Bengaluru 23°C
Ad

ಕಲ್ಲಾಪು ಗ್ಲೋಬಲ್ ಮಾರ್ಕೆಟ್ ನಲ್ಲಿ ಬೆಂಕಿ ಅವಘಡ; ಬೆಂಕಿಗೆ ಹೊತ್ತಿ ಉರಿದ ಅಂಗಡಿಗಳು

Kallap

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ಟೆ ನಲ್ಲಿ ನಡೆದಿದೆ. ಇಂದು ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ.

ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Ad
Ad
Nk Channel Final 21 09 2023
Ad