Bengaluru 24°C
Ad

ಉಪ್ಪಿನಂಗಡಿಯ ಪೃಥ್ವಿ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ

ಉಪ್ಪಿನಂಗಡಿಯಲ್ಲಿರುವ ಪೃಥ್ವಿ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಸಾರ್ವಜನಿಕರು ಶಂಕಿಸಿದ್ದಾರೆ. 

ಪುತ್ತೂರು: ಉಪ್ಪಿನಂಗಡಿಯಲ್ಲಿರುವ ಪೃಥ್ವಿ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಸಾರ್ವಜನಿಕರು ಶಂಕಿಸಿದ್ದಾರೆ.

Ad
300x250 2

ಘಟನೆಯಿಂದ ನಾಲ್ಕು ಅಂಗಡಿಗಳು ಹೊತ್ತಿ ಉರಿದಿದ್ದು, ಅಂಗಡಿಯೊಳಗಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ. ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.

ರಾತ್ರಿಯ ವೇಳೆ ಬಹುತೇಕ ಅಂಗಡಿಗಳು ಮುಚ್ಚಿದ್ದ ಪರಿಣಾಮ‌ ಭಾರೀ ಅನಾಹುತ ತಪ್ಪಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಉಪ್ಪಿನಂಗಡಿ ಪೇಟೆಯ ಸುತ್ತ ದಟ್ಟಹೊಗೆಯಿಂದ ತುಂಬಿತ್ತು.

Ad
Ad
Nk Channel Final 21 09 2023
Ad