Bengaluru 27°C
Ad

ಕರಾವಳಿಯಲ್ಲಿ ಭಾರೀ ಮಳೆಯಾಗುವ ಹಿನ್ನಲೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದ ಕರಾವಳಿಯಲ್ಲಿ ಭಾರೀ‌ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಅರಬ್ಬೀ ಸಮುದ್ರದಲ್ಲೂ ಎರಡು ದಿನಗಳ ಕಾಲ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆಯ ಸೂಚನೆ ನೀಡಿದ್ದು ತಕ್ಷಣ ಸಮುದ್ರದಿಂದ ವಾಪಸ್‌ ಬರುವಂತೆ ಆದೇಶಿಸಿದೆ. ಹೀಗಾಗಿ ಹೆಚ್ಚಿನ ಮೀನುಗಾರಿಕಾ ಬೋಟ್‌ಗಳು ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad