ಮಂಗಳೂರು: ಹೊರವಲಯದ ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ದೋಣಿ ಹೊರಟ್ಟಿತ್ತು. ದೋಣಿಯಲ್ಲಿದ್ದ 6 ಮಂದಿ ಮೀನುಗಾರರು ಇದ್ದರು. ಆಂಧ್ರಪ್ರದೇಶದ ಮೂಲದ ಮೀನುಗಾರರ ರಕ್ಷಣೆ ಮಾಡಲಾಯಿತು.
ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ. ಸಮುದ್ರಕ್ಕೆ ಬಿದ್ದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಸ್ಥಳೀಯ ಮೀನುಗಾರರಿಂದ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

