ಮೂಡುಬಿದಿರೆ: ಆಹಾರ ವಸ್ತುಗಳಲ್ಲಿ ಕಲಬೆರಕೆ ಹಾಗೂ ರಾಸಾಯನಿಕ ಬಳಕೆಯ ಆರೋಪಗಳ ಹಿನ್ನೆಲೆಯಲ್ಲಿ ಬೆದ್ರ ವಾರದ ಸಂತೆಯಲ್ಲಿ ಆರೋಗ್ಯ ಇಲಾಖೆ, ಪುರಸಭೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿವಿಧ ಆಹಾರ ವಸ್ತುಗಳ ಸ್ಯಾಂಪಲ್ ಸಂಗ್ರಹಿಸಿದರು.
ಅಧಿಕಾರಿಗಳು ಸಂತೆ ಪ್ರದೇಶದಲ್ಲಿನ ತರಕಾರಿ, ಹಣ್ಣು-ಹಂಪಲು ಮಾರಾಟ ಮಳಿಗೆಗಳು ಹಾಗೂ ಫಾಸ್ಟ್ಫುಡ್ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಆಹಾರ ವಸ್ತುಗಳ ಸ್ವಚ್ಛತೆ ಮತ್ತು ಆಹಾರ ಸುರಕ್ಷತೆಯ ಕುರಿತು ಪರಿಶೀಲನೆ ನಡೆಸಿ, ಕೆಲವೆಡೆ ಸ್ಯಾಂಪಲ್ಗಳನ್ನು ಸಂಗ್ರಹಿಸಲಾಯಿತು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿ ಡಾ. ಪ್ರವೀಣ್, ಪುರಸಭೆ ಆರೋಗ್ಯ ನಿರೀಕ್ಷಕಿ ಶಶಿರೇಖಾ, ಆರೋಗ್ಯ ನಿರೀಕ್ಷಕ ಖಾದರ್ ನದಾಫ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.

