ಮಂಗಳೂರು : ನೆಹರೂ ಮೈದಾನ ಬಳಿಯ ಸುಸಜ್ಜಿತ ಆಸ್ಟ್ರೊ ಟರ್ಫ್ ಫುಟ್ಬಾಲ್ ಕ್ರೀಡಾಂಗಣ ಬುಧವಾರ ಉದ್ಘಾಟನೆಗೊಂಡಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೂತನ ಕ್ರೀಡಾಂಗಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಂಗಳೂರಿನಲ್ಲಿ ಉತ್ತಮ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣಗೊಂಡಿದೆ. ಮುಂದೆ ಈ ಕ್ರೀಡಾಂಗಣದಲ್ಲಿ ಇನ್ನಷ್ಟು ಸೌಲಭ್ಯ ಒದಗಿಸಲಾಗುವುದು ಎಂದರು.

ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ, ಐವನ್ ಡಿಸೋಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಪುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ.ಅಸ್ಲಂ ಮತ್ತಿತರರು ಉಪಸ್ಥಿತರಿದ್ದರು.

