ಮಂಗಳೂರು : ಕರಾವಳಿಗರಿಗೆ ತುಳು ಭಾಷೆ ಕೇವಲ ಭಾವನಾತ್ಮಕ ಮಾತ್ರವಲ್ಲ, ಅದು ನಮ್ಮ ಅಸ್ಮಿತೆಯ ವಿಚಾರ. ಅದಕ್ಕೆ ಮಾನ್ಯತೆ ಸಿಗಬೇಕು ಎಂಬುದು ಎಲ್ಲರ ಅಭಿಲಾಷೆಯಾಗಿದ್ದು, ಕರಾವಳಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ ಬೇಡಿಕೆ ಈಡೇರುವ ನಿರೀಕ್ಷೆ ಇದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿರುವ ಡಿ.ಕೆ. ಶಿವಕುಮಾರ್ ಅವರು ಚಟುವಟಿಕೆಯಿಂದ ಕೆಲಸ ಮಾಡುತ್ತಾ ಜನರ ನಾಡಿ ಮಿಡಿತ ಅರಿತು ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ ಸಕ್ರಿಯರಾಗಿದ್ದಾರೆ.
ಹಾಗಾಗಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಪ್ರವಾಸೋದ್ಯಮ, ಐಟಿ ಪಾರ್ಕ್, ಮೀನುಗಾರಿಕೆ ಸೇರಿದಂತೆ ಬಹಳಷ್ಟು ನಿರ್ಧಾರಗಳನ್ನು ಕೈಗೊಳ್ಳುವ ಭರವಸೆ ಇದೆ ಎಂದರು.

