ಮಂಗಳೂರು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಅರಗ ಜ್ಞಾನೇಂದ್ರ ಅತ್ಯಂತ ಲಘುವಾಗಿ ಮಾತನಾಡಿದ್ದಾರೆ. ಅವರಿಗೆ ಬುದ್ದಿ ಭ್ರಮಣೆ ಆಗಿದೆ. ನಾವೆಲ್ಲಾ ಹುಚ್ಚಾಸ್ಪತ್ರೆಯಲ್ಲಿ ಇರಬೇಕೆಂದು ಹೇಳಿದ್ದಾರೆ.
ಅಂದ್ರೆ ನಮ್ಮನ್ನು ಆರಿಸಿದವರು ಜನರು. ಅವರ ಮೇಲಿರುವ ಆರೋಪಗಳಿಗೆ ಅವರಿಗೆ ಉತ್ತರ ನೀಡೋದಕ್ಕೆ ಆಗ್ತಿಲ್ಲ. ಯಾವಾಗ ಉತ್ತರ ಕೊಡೋದಕ್ಕೆ ಆಗಲ್ಲ ಆಗ ಈ ರೀತಿಯ ವ್ಯಾಕರಣ ಹೊರ ಬರುತ್ತೆ. ಆಯೋಗದ ವರದಿಯಲ್ಲಿ ಬಂದಿರುವ ಬಗ್ಗೆ ಉತ್ತರ ನೀಡಲಿ.
ಹಿಂದಿನ ಆರೋಗ್ಯ ಸಚಿವರ ಬಗ್ಗೆ ವರದಿಯಲ್ಲುಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಅವರನ್ನು ಪ್ರಾಷಿಕ್ಯೂಷನ್ ಮಾಡುವ ಬಗ್ಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ಉಲ್ಲೇಖಿಸಲಾಗಿದೆ. ಇಡಿ ಯೋಜನೆಗಳಲ್ಲಿ ಮೋಸ ಆಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಮೀರಲಾಗಿದೆ. ಎಲ್ಲವೂ ವರದಿಯಲ್ಲಿ ಸ್ಪಷ್ಟವಾಗಿದೆ ಎಂದರು.
ಮೋದಿಯವರು ಸಣ್ಣ ಸಣ್ಣ ವಿಚಾರವನ್ನು ಚುನಾವಣೆ ಸಂದರ್ಭ ಮಾತನಾಡುತ್ತಾರೆ. ಅದಕ್ಕೆ ಯಾವುದೇ ದಾಖಲೆಗಳು ಇರೋದಿಲ್ಲ. ಅವರಿಗೆ ಯಾವುದೇ ಲಂಗು ಲಗಾಮು ಇಲ್ಲ. ಬಿಜೆಪಿಯವರಿಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.