ಮಂಗಳೂರು: ಸಹೋದರನನ್ನ ನೆನೆದು ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಕಣ್ಣೀರು ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದನು. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ ಎಂದರು.
ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ. ರಾಜಕೀಯ ರಹಿತವಾಗಿ ಕೆಲಸ ಮಾಡಿದ್ದ ವ್ಯಕ್ತಿ. 24 ಗಂಟೆ ಕಳೆದರೂ ಇನ್ನು ಬಾಡಿ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

