ಮಂಗಳೂರು : ದ.ಕ ಜಿಲ್ಲೆಯ ಮಂಗಳೂರು ಮೀನುಗಾರಿಕಾ ಬಂದರಿನ ಮೂರನೆ ಹಂತದ ಆಧುನಿಕರಣ ಕಾಮಗಾರಿ ಮೀನುಗಾರಿ ಇಲಾಖೆ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ 3747.10 ಲಕ್ಷ ರೂಪಾಯಿ ಕಾಮಗಾರಿಯ ಶಂಕು ಸ್ಥಾಪನಾ ಕಾರ್ಯಕ್ರಮ ಮಂಗಳೂರಿನ ಸೌತ್ ವಾರ್ಫ್ ಬಂದರ್ ನಲ್ಲಿ ನೆರವೇರಿತು.

ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮೀನುಗಾರಿಕಾ ಬಂದವರು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ,ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಚಾಲನೆ ನೀಡಿದರು

ಈ ವೇಳೆ ಕರ್ನಾಟಕ ಸರ್ಕಾರದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್, ಟ್ರಾಲ್ ಬೋಟ್ ಯೂನಿಯನ್ ಅಧ್ಯಕ್ಷ ಚೇತನ್ ಬೆಂಗರೆ, ಬೆಂಗಳೂರು ಮೀನುಗಾರಿಕಾ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್ ಮತ್ತಿತರರು ಉಪಸ್ಥಿತರಿದ್ದರು.