ಮಂಗಳೂರು : ಉತ್ತರ ಕನ್ನಡ ಜಿಲ್ಲೆಯ ಬನವಾಸಿ ಸಮೀಪದ ಸೊರಬ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ (29) ಬಂಧಿತ. ಓಎಲ್‌ಎಕ್ಸ್‌ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ 2.50 ಲಕ್ಷ ರೂ. ಪಡೆದು ವಂಚನೆ ಮಾಡಿದ್ದ. ಈ ಬಗ್ಗೆ ಶನಿವಾರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಆರೋಪಿಯು ಹೊಸಪೇಟೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದು ಬಂದಿತ್ತು. ಅದರಂತೆ ಕಾರ್ಯಪ್ರವೃತ್ತರಾದ ಪೊಲೀಸರು ಹೊಸಪೇಟೆಯಿಂದ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ಬೇರೆ ಬೇರೆ ಬ್ಯಾಂಕ್‌ಗಳಲ್ಲಿ 21 ಖಾತೆಗಳನ್ನು ಹೊಂದಿದ್ದು, 8 ಸಿಮ್ ಕಾರ್ಡ್‌ಗಳು ಬಳಕೆ ಮಾಡಿರುವುದು ತನಿಖೆಯ ವೇಳೆ ತಿಳಿದು ಬಂದಿದೆ. 8 ಮೊಬೈಲ್ ನಂಬರ್‌ಗಳ ಮೇಲೆ 80ಕ್ಕೂ ಹೆಚ್ಚಿನ ಸೈಬರ್ ವಂಚನೆ ದೂರುಗಳು ದಾಖಲಾಗಿದೆ ಎನ್ನಲಾಗಿದೆ.

ಆರೋಪಿಯು 3 ವರ್ಷಗಳಿಂದ ಓಎಲ್‌ಎಕ್ಸ್‌ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ತಾನು ಉಪಯೋಗಿಸುತ್ತಿದ್ದ ಮೊಬೈಲನ್ನು ಕೆಲವು ದಿನಗಳ ಬಳಿಕ ಮಾರಾಟ ಮಾಡುತ್ತಿದ್ದು, ಹೊಸ ಸಿಮ್‌ಗಳನ್ನು ಬಳಸುತ್ತಿದ್ದ ಎನ್ನಲಾಗಿದೆ.