Bengaluru 27°C
Ad

ಮಂಗಳೂರಿನ 386 ಕಡೆ ಸಾರ್ವಜನಿಕ ಗಣೇಶೋತ್ಸವ : ಪೊಲೀಸ್‌ ಇಲಾಖೆ ಮುನ್ನೆಚ್ಚರಿಕೆ

ದ.ಕ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್‌ ಇಲಾಖೆ ಗುರುತಿಸಿದೆಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.17ರ ವರೆಗೆ ಒಟ್ಟು 165 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಇದರಲ್ಲಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ ಮತ್ತು 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಯೆಂದು ಪರಿಗಣಿಸಲಾಗಿದೆ.

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್‌ ಇಲಾಖೆ ಗುರುತಿಸಿದೆಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.17ರ ವರೆಗೆ ಒಟ್ಟು 165 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಇದರಲ್ಲಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ ಮತ್ತು 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಯೆಂದು ಪರಿಗಣಿಸಲಾಗಿದೆ.

ದ.ಕ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.13ರ ವರೆಗೆ ಒಟ್ಟು 221 ಕಡೆಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಗುತ್ತದೆ. ಇದರಲ್ಲಿ 8 ಅತೀ ಸೂಕ್ಷ್ಮ, 53 ಸೂಕ್ಷ್ಮ ಹಾಗೂ 160 ಸಾಮಾನ್ಯ ಗಣೇಶೋತ್ಸವ ಪ್ರತಿಷ್ಠಾಪನಾ ಮೆರವಣಿಗೆಗಳು ಎಂಬುದಾಗಿ ಪರಿಗಣಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಹಾಗೂ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌. ತಿಳಿಸಿದ್ದಾರೆ.

ಶಾಂತಿ ಸಭೆ: ಗಣೇಶೋತ್ಸವ ಹಾಗೂ ಈದ್‌-ಮಿಲಾದ್‌ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಧರ್ಮದ ಮುಖಂಡರು, ಆಯೋಜಕರ ಶಾಂತಿ ಸಭೆ ನಡೆಸಲಾಗಿದೆ. ಪ್ರತಿಷ್ಠಾಪನೆಗೆ ಮೊದಲು ಅನುಮತಿ ಪಡೆಯಬೇಕು, ರಾತ್ರಿ 10 ಗಂಟೆಯ ಬಳಿಕ ಸುಡುಮದ್ದು/ಪಟಾಕಿ ಬಳಸುವಂತಿಲ್ಲ

Ad
Ad
Nk Channel Final 21 09 2023