ಕಾರ್ಕಳ: ಯುವತಿಗೆ ಮಾದಕ ಪದಾರ್ಥ ನೀಡಿ, ಅತ್ಯಾಚಾರವೆಸಿದ್ದ ಆರೋಪಿಗಳನ್ನು ಕಾರ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯುವತಿ ತಾಯಿಯ ದೂರು ಆಧರಿಸಿ ಮೂವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಮುಖ ಆರೋಪಿ ಅಲ್ತಾಫ್ ಸೇರಿ ಇಬ್ಬರನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾಳೆ. ಯುವತಿಗೆ ಅಲ್ತಾಫ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದಾನೆ.
ಶುಕ್ರವಾರ ಮುಂಚಾನೆ ಅಲ್ತಾಫ್ ಯುವತಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ, ಯುವತಿಗೆ ಮಾದಕ ವಸ್ತು ನೀಡಿ, ಸಂಜೆಯವರೆಗೆ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಯುವತಿ ತಾಯಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಅಲ್ತಾಫ್ ವಿರುದ್ಧ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿದೆ.

