ವಿಟ್ಲ: ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಶುಕ್ರವಾರ ತಡರಾತ್ರಿ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ. ಅನಂತೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಘಟನೆ ವೇಳೆ ಮನೆಯಲ್ಲಿ ಯಾರು ಇದ್ದಿರಲಿಲ್ಲ. ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕಿವಿಯೋಲೆ ಮತ್ತು ಸರ ಸೇರಿ ಸುಮಾರು ಎರಡು ಪವನ್ ನ ಚಿನ್ನಾಭರಣ ಕಳವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

