ಮಂಗಳೂರು: ಗೂಡ್ಸ್ ಟೆಂಪೋವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ.

ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ ಸಜೇಶ್ ಪೂಜಾರಿ ಮೃತದುರ್ದೈವಿ. ಇವರು ಮಂಗಳೂರಿನ ಟಾಟಾ ಶೋರೂಮ್ ನಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮಾ.9ರಂದು ತನ್ನ ಬೈಕ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪ ತಿರುವಿನಲ್ಲಿ ಟೆಂಪೋ ಡಿಕ್ಕಿ ಹೊಡೆದಿದ್ದು, ಬೈಕ್ ಸಮೇತ ರಸ್ತೆಗೆ ಬಿದ್ದ ಸಜೇಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸಜೇಶ್ ಅವರು ಸಣ್ಣ ವಯಸ್ಸಿನಲ್ಲೇ ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಐದು ತಿಂಗಳ ಹಿಂದೆಯಷ್ಟೇ ಹೊಸ ಮನೆಯೊಂದನ್ನು ಕಟ್ಟಿ ಒಬ್ಬರೇ ವಾಸಿಸುತ್ತಿದ್ದರು‌ ಎನ್ನಲಾಗಿದೆ.

View this post on Instagram

A post shared by News Karnataka (@newskarnataka)