ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ಧರ್ಮ ದ್ವೇಷದ ಭಾಷಣ ಆರೋಪ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಮಂಗಳೂರು ಸೆನ್ ಪೊಲೀಸರು ಇದೀಗ ಎಫ್‌ಐಆರ್ ದಾಖಲಿಸಿದ್ದಾರೆ.
‘ಹಿಂದುಗಳು ಹಿಂದು ಮಾಲಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು’ ‘ಹಿಂದು ಮಾಲಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು’ ‘ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು’ ‘ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ’ ಎಂದು ಧರ್ಮ ದ್ವೇಷದ ಭಾಷಣ ಮಾಡಿದ್ದರು.
ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದರು. ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಪ್ರಕರಣ ದಾಖಲು ಮಾಡಲಾಗಿದೆ.
ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಿರುವ ಅರುಣ್ ಉಳ್ಳಾಲ್ ಅವರ ಭಾಷಣದ ವಿಡಿಯೋ ವೈರಲ್ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಎಡಪಂಥೀಯರು ಹಾಗೂ ಅನ್ಯ ಧರ್ಮೀಯ ಸಂಘಟನೆಗಳಿಂದ ವಿರೋಧ ಬೆನ್ನಲ್ಲೇ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

