ಬೆಳ್ತಂಗಡಿ: ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಎಚ್.ಡಿ ರೇವಣ್ಣ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
Ad
ತಡ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ವಿಶೇಷ ಪೂಜೆ ಸಲ್ಲಿಸಿ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ. ಇನ್ನು ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ ಎಚ್.ಡಿ ರೇವಣ್ಣ.
Ad
ಇನ್ನು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಭೇಟಿಗೆ ತೆರಳಿದ ರೇವಣ್ಣ ನಾನು ಮಂಜುನಾಥ ಸ್ವಾಮಿಯ ಭಕ್ತ. ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರ್ತೇನೆ ಎಂದು ಹೇಳಿ ತೆರಳಿದ್ದಾರೆ.
Ad
Ad