ಮಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಕೋವಿಡ್ ಹಗರಣದ ಕುರಿತು ನ್ಯಾ.ಡಿಕುನ್ಹಾ ಪ್ರಥಮ ವರದಿ ನೀಡಿದ್ದಾರೆ. ಎರಡನೇ ಮತ್ತು ಕೊನೆಯ ವರದಿ ನೀಡಬೇಕಾಗಿದೆ. ಪ್ರಥಮ ವರದಿಯಲ್ಲಿ ಕೋವಿಡ್ ಸಂದರ್ಭದ ಅವ್ಯವಹಾರಗಳು ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ
ಇದರಲ್ಲಿ ದಾರಿ ತಪ್ಪಿಸುವ ತಂತ್ರ ಏನಿಲ್ಲ. ನಿಯಮ ಬದ್ದವಾಗಿ ಕಾನೂನು ಪ್ರಕಾರ ತನಿಖೆ ಮುಂದುವರಿಸುತ್ತೇವೆ. ಇದರಲ್ಲಿ ರಾಜಕೀಯ ದುರುದ್ದೇಶ ಏನಿಲ್ಲ. ಜಸ್ಟೀಸ್ ಡಿಕೂನ್ಹಾ ಅತ್ಯಂತ ಪ್ರಾಮಾಣಿಕ ನ್ಯಾಯಾಧೀಶರು ಎಂದರು.
ಪ್ರಹ್ಲಾದ್ ಜೋಷಿ ಹೇಳಿಕೆಗೂ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಇದರಿಂದ ಸಮಸ್ಯೆ ಆಗಿದೆ. ಜೋಷಿ ವಿರುದ್ಧ ಪ್ರಕರಣ ದಾಖಲಾದ್ರೆ ಅವರು ಜೈಲು ಸೇರುವ ಸಂದರ್ಭ ಬರಬಹುದು. ಈ ವಿಚಾರದಲ್ಲಿ ನ್ಯಾ.ಡಿಕೂನ್ಹಾ ಏನು ಮಾಡುತ್ತಾರೆಂದು ಗೊತ್ತಿಲ್ಲ.
ನಾವು ಈ ಕುರಿತು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ. ಒಬ್ಬ ಜಡ್ಜ್ ಬಗ್ಗೆ ಆ ರೀತಿ ಮಾತನಾಡುವಂತಿಲ್ಲ. ಈ ವರದಿಯಲ್ಲಿರುವುದು ನಾವು ಹುಟ್ಟು ಹಾಕಿರೋದಲ್ಲ. ನಮ್ಮ ಇಲಾಖೆಯಲ್ಲಿರುವ ಇರುವ ಮಾಹಿತಿ ಸಂಗ್ರಹಿಸಿ ತನಿಖೆ ಮಾಡಿ ಅದರ ವರದಿ ನೀಡಿದ್ದಾರೆ. ಇದು ಐಟಿ, ಇ.ಡಿ ತರ ರಾಜಕೀಯ ಪ್ರೇರಿತ ಅಲ್, ಇ.ಡಿ, ಐ.ಟಿ ಗೆ ಖಾಲಿ ವಿರೋಧ ಪಕ್ಷ ಮಾತ್ರ ಕಾಣುತ್ತೆ. ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.