ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ದರ್ಪಣ ತೀರ್ಥ ಹೊಳೆ ಉಕ್ಕಿ ಹರಿಯುತ್ತಿದೆ.

ಸತತ ಮಳೆಯ ಪ್ರಭಾವದಿಂದ ದರ್ಪಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ನದಿ ನೀರು ಪ್ರವಾಹದ ರೂಪದಲ್ಲಿ ಬಂದು ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲ ತನಕ ನುಗ್ಗಿದೆ.

ಹೊಳೆ ನೀರು ಕ್ಷೇತ್ರ ವ್ಯಾಪ್ತಿಗೆ ನುಗ್ಗಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವ ಭಕ್ತರು ಓಡಾಡಲು ಮತ್ತು ದರ್ಶನ ಪಡೆಯಲು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಭಾರೀ ಮಳೆಯಿಂದಾಗಿ ಸ್ಥಳೀಯವಾಗಿ ಅವಾಂತರ ಸೃಷ್ಟಿಯಾಗಿದ್ದು, ಮಳೆಯ ಅಬ್ಬರ ಮುಂದುವರಿದಿದೆ. ಭುದವರ ಮಳೆಯ ಪ್ರಮಾಣ ಕಡಿಮೆ ಆಗಿದ್ದು ಬಿಸಿಲಿನ ವಾತಾವರಣ ಇದೆ. ಸತತ ಮಳೆಯ ಪ್ರಭಾವದಿಂದ ದರ್ಪಣ ತೀರ್ಥ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ.

View this post on Instagram

A post shared by News Karnataka (@newskarnataka)