Bengaluru 23°C
Ad

ಘಟ್ಟ ಪ್ರದೇಶದಲ್ಲಿ ಭಾರೀ ಮಳೆ: ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಿದೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ.

W

ತುಂಬಿ ಹರಿಯುತ್ತಿರುವುದರಿಂದ ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ದೇಗುಲಕ್ಕೆ ಬರುವ ಭಕ್ತರು ನದಿ ದಡದಲ್ಲೇ ತೀರ್ಥಸ್ನಾನ ಮಾಡುತ್ತಿದ್ದಾರೆ. ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ.

Ad
Ad
Nk Channel Final 21 09 2023
Ad