ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ.ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕ ಶಿಕ್ಷಣ ಸಂಸ್ಥೆಗಳಿಗೆ ಆ.1ರಂದೂ ರಜೆ ಮುಂದುವರಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.

ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿಗಳಿಂದ ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ದ್ವಿತೀಯ ಪಿಯುಸಿ ಕಾಲೇಜುಗಳಿಗೆ ಆ.1ರಂದೂ ರಜೆ ಮುಂದುವರಿಸಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.